ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಬೆಳಗಾವಿ ನಗರದ ಮುಖ್ಯ ರಸ್ತೆಗಳಲ್ಲಿ ಒಂದಾಗಿರುವ ಮಹಾಂತೇಶ ನಗರದ ಸೇತುವೆಯಿಂದ ಕಣಬರ್ಗಿ ರಸ್ತೆವರೆಗಿನ 2 ಕಿ.ಮೀ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ 1 ಕೋಟಿ ರೂಪಾಯಿ ಅನುದಾನದಲ್ಲಿ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ಎಲ್ಲ ಕಡೆಗಳಲ್ಲಿ ಅಭಿವೃಧ್ದಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಕುಡಿಯುವ ನೀರಿನ ಪೈಪಲೈನ್ ಕಾಮಗಾರಿಯು ನಡೆಯುತ್ತಿದ್ದರಿಂದ ಈ ರಸ್ತೆ ನಿರ್ಮಾಣ ಕಾಮಗಾರಿಯು ತಡವಾಗಿತ್ತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಸೇವಕರು, ಸ್ಥಳೀಯ ನಿವಾಸಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಅರವಿಂದ ದ್ಯಾಮನ್ನವರ, ಗುತ್ತಿಗೆದಾರ ಭರತೇಶ ಬುಡವಿ ಮೊದಲಾದವರು ಉಪಸ್ಥಿತರಿದ್ದರು.
56 ಲಕ್ಷ ರೂ. ವೆಚ್ಚದಲ್ಲಿ ಹಲಗಾ ಗ್ರಾಮದ ರಸ್ತೆಗಳ ಅಭಿವೃದ್ಧಿ
https://pragati.taskdun.com/at-cost-of-56-lakh-rs-development-of-roads-in-halaga-village/
1.38 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಚನ್ನರಾಜ ಹಟ್ಟಿಹೊಳಿ ಪೂಜೆ
https://pragati.taskdun.com/development-of-roads-at-cost-1-38-crore-rs-channaraja-hattiholi-performed-puja/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ