ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗಷ್ಟೇ ಮಾಂಡೌಸ್ ಚಂಡಮಾರುತದ ಅಬ್ಬರದಿಂದ ವರುಣಾರ್ಭಟಕ್ಕೆ ತತ್ತರುಸಿದ್ದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಮತ್ತೆ ಮಳೆಯ ಅಬ್ಬರಕ್ಕೆ ಒಳಗಾಗಿವೆ.
ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಇನ್ನೂ ನಾಲ್ಕುದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಟ್ಟ ಚಳಿಯ ನಡುವೆಯೇ ರಾಜ್ಯದಲ್ಲಿ ಮಳೆ ಆರಂಭವಾಗಿದ್ದು, ಕೊರೊನಾ ರೂಪಾಂತರಿ ಭೀತಿ ಇನ್ನಷ್ಟು ಹೆಚ್ಚಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಖಿನ್ನತೆಗೆ ತಿರುಗಿದ ನಂತರ ತಮಿಳುನಾಡಿನ ಅನೇಕ ಸ್ಥಳಗಳು ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡಿನ ದಕ್ಷಿಣ ಒಳನಾಡಿನಲ್ಲಿಯೂ ಭಾರಿ ಮಳೆಯಾಗುತ್ತಿದೆ.
ಬೆಳಗಾವಿ: ಮಾರಣಾಂತಿಕ ಹಲ್ಲೆ; ಇಬ್ಬರು ಯುವಕರ ಸಾವು
https://pragati.taskdun.com/fatal-attack-on-two-in-belgaum-one-dead/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ