ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ವ್ಯಕ್ತಿ ಸೇರಿದಂತೆ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವುರ್ಣವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೊವಿಕ್ ಸೀಕ್ವೆನ್ಸಿಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾರೂ ಗಾಭರಿಯಾಗುವ ಅಗತ್ಯವಿಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ತಿಳಿಸಿದರು.
*ರಾಜ್ಯದ 9 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*
https://pragati.taskdun.com/karnatakarain4-daysimd/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ