Latest

*ಎಲ್ಲರೂ ಮಾಸ್ಕ್ ಧರಿಸಿ; ಆರೋಗ್ಯ ಸಚಿವ ಡಾ.ಸುಧಾಕರ್ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚುತ್ತಿದ್ದು, ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಕೋವಿಡ್ ನಿಯಂತ್ರಣದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗ ಅಗತ್ಯವಿದೆ. ಎಲ್ಲರೂ ಮಾಸ್ಕ್ ಧರಿಸಬೇಕು ಎಂದರು.

ಜನಸಂದಣಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವ ಅಗತ್ಯವಿದೆ. ಕೊರೊನಾ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಜಾಗೃತೆ ವಹಿಸುವುದು ಮುಖ್ಯ ಎಂದು ಹೇಳಿದರು.

*ಚೀನಾದಿಂದ ಬಂದ ವ್ಯಕ್ತಿ ಸೇರಿ 9 ಪ್ರಯಾಣಿಕರಿಗೆ ಕೊರೊನಾ ದೃಢ*

Home add -Advt

https://pragati.taskdun.com/karnataka-covid-casebf-7bangalore9-peoplecovid-positevebf-7/

Related Articles

Back to top button