Latest

*ಮತ್ತೆ ನಾಲ್ವರು ಪ್ರಯಾಣಿಕರಲ್ಲಿ ಕೊರೊನಾ ದೃಢ; ಸೋಂಕಿತ ಪ್ರಯಾಣಿಕರ ಸಂಖ್ಯೆ 16ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.

ಕಳೆದ ನಾಲ್ಕು ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಆಗಮಿಸಿದ 16 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಹೊಸ ವರ್ಷದ ಸಂದರ್ಭದಲ್ಲೇ ಮಹಾಮಾರಿ ಅಟ್ಟಹಾಸ ಮತ್ತೆ ಮರುಕಳಿಸುವ ಭೀತಿ ಎದುರಾಗಿದೆ.

Home add -Advt

ನಿನ್ನೆ ವಿದೇಶದಿಂದ ಆಗಮಿಸಿದ 119 ಪ್ರಯಾಣಿಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ ನಾಲ್ವರಲ್ಲಿ ಪಾಸಿಟಿವ್ ಬಂದಿದ್ದು, ಪ್ರತಿಯೊಬ್ಬ ಸೋಂಕಿತರನ್ನು ಐಸೋಲೇಟ್ ಮಾಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ. ಸೋಂಕಿತರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಒಟ್ಟಾರೆ ಬೆಂಗಳೂರಿನಲ್ಲಿ ನಿಧಾನವಾಗಿ ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

*ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ*

https://pragati.taskdun.com/mixiblastdtdc-courier-officehasana/

 

Related Articles

Back to top button