Kannada NewsLatest

*ಹುಬ್ಬಳ್ಳಿ-ಧಾರವಾಡ 24/7 ಕುಡಿಯುವ ನೀರು ಯೋಜನೆ: ಗುತ್ತಿಗೆದಾರರ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ 24/7 ನಿರಂತರ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಚುರುಕುಗೊಳಿಸಲು ಸಂಬಂಧಿಸಿದಂತೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಉನ್ನತ ಮಟ್ಟದ ಸಭೆಯಾಗಿದೆ. ಗುತ್ತಿಗೆದಾರರನ್ನು ಬದಲಾವಣೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜ ಹೇಳಿದರು.

ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ಹುಬ್ಬಳ್ಳಿ ನಗರಕ್ಕೆ 24/7 ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿಯನ್ನು ಈ ಹಿಂದೆ ಕೆಯುಐಡಿಎಫ್‍ಸಿ ಸಂಸ್ಥೆ ನಿರ್ವಹಿಸುತ್ತಿತ್ತು. ಆಗ ಚೆನ್ನಾಗಿ ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಎಲ್ ಆಂಡ್ ಟಿ ಕಂಪನಿಗೆ ಜವಾಬ್ದಾರಿ ವಹಿಸಿದ ನಂತರ, ನೀರು ಪೂರೈಕೆಯಲ್ಲಿ ಬಹಳ ವ್ಯತ್ಯಯವಾಗುತ್ತಿದೆ. 8 ರಿಂದ 10 ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಕುಡಿಯುವ ನೀರಿಗಾಗಿ ಜನ ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣ ಎಲ್ ಆ್ಯಂಡ್ ಟಿ ಸಂಸ್ಥೆಯ ಟೆಂಡರ್ ರದ್ದು ಮಾಡಿ ಕಪ್ಪು ಪಟ್ಟಿಗೆ ಸೇರಿಸಿ, ಈ ಹಿಂದಿನಂತೆ ಜಲಮಂಡಳಿಗೆ ವಹಿಸಿಕೊಡಲು ಆಗ್ರಹಿಸಿದರು.

ಸಚಿವ ಬಿ.ಎ.ಬಸವರಾಜ ಪ್ರತಿಕ್ರಿಯಿಸಿ ಸಭೆ ಇತ್ತೀಚೆಗೆ ಮುಗಿದಿದ್ದು, ಶೀಘ್ರದಲ್ಲಿಯೇ ಗುತ್ತಿಗೆದಾರರನ್ನು ಬದಲಾಯಿಸಲಾಗುವುದೆಂದರು.

*ಕೇಂದ್ರ ಸರ್ಕಾರದ ಸಾರ್ವಜನಿಕ ಒಡೆತನದ ಉದ್ದಿಮೆಗಳ: ಹೆಚ್ಚುವರಿ ಭೂಮಿ ಮರಳಿ ಸರ್ಕಾರದ ಒಡೆತನಕ್ಕೆ*

https://pragati.taskdun.com/murugesh-niranividhana-parishathbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button