Latest

*ಭೀಕರ ಅಗ್ನಿ ದುರಂತ; ಮೂವರು ಮಕ್ಕಳು ಸೇರಿ ಐವರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಲಖನೌ: ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಮೌ ಪಟ್ಟಣದ ಗ್ರಾಮವೊಂದರಲ್ಲಿ ನಡೆದಿದೆ.

ಶಹಪುರ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಕುಟುಂಬದ ಸದಸ್ಯರನ್ನು ರಕ್ಷಸಲು ಹರಸಾಹಸಪಟ್ಟಿದ್ದಾರೆ. ಆದರೆ ಸಾಧ್ಯವಾಗಿಲ್ಲ.

ಘಟನೆ ಬಗ್ಗೆ ಮೌ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಅವರಲ್ಲಿ ಮೂವರು ಮಕ್ಕಳಿದ್ದಾರೆ. ಮನೆಯಲ್ಲಿ ಒಲೆಯಿಂದ ಹಾರಿದ ಕಿಡಿಯಿಂದ ಬೆಂಕಿ ಅನಾಹುತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಗೆ ಧಾವಿಸಲಾಗಿತ್ತು. ಆದರೆ ಜೀವ ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಸರ್ಕಾರ 4 ಲಕ್ಷ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

Home add -Advt

297 ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ -ಸಚಿವ ಎಸ್.ಟಿ.ಸೋಮಶೇಖರ್

https://pragati.taskdun.com/quick-recruitment-order-for-297-candidates-minister-st-somashekhar/

Related Articles

Back to top button