ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿರುವ ಪೊಳ್ಳು ಹೇಳಿಕೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಇದಕ್ಕೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, “ಮುಖ್ಯಮಂತ್ರಿಗಳು ಈ ರೀತಿ ಪೊಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಆಶ್ಚರ್ಯಕರವೇನಲ್ಲ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸಿದ್ಧರಿಲ್ಲದಿದ್ದರೆ, ಇಷ್ಟರಲ್ಲಾಗಲೇ ಕ್ರಮ ಕೈಗೊಳ್ಳಬೇಕಿತ್ತು. ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದಿಲ್ಲಿಗೆ ಕರೆದುಕೊಂಡು ಹೋಗಲಿ. ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕ ಭರವಸೆ ನೀಡಲಿ ಎಂದು ಸವಾಲೆಸೆದಿದ್ದಾರೆ.
Not surprised that CM is merely doing lip service with hollow statements. If he actually means that he doesn't want to cede an inch of Karnataka to Maharashtra, he should immediately take a all party delegation to Delhi and let Home Minister give a public assurance on the matter. pic.twitter.com/0vQA5p96D6
— DK Shivakumar (@DKShivakumar) December 28, 2022
*ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲು*
https://pragati.taskdun.com/pm-narendra-modis-motherheerabenadmittedhospitalahmedabad/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ