ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ, ಶತಾಯುಷಿ ಹೀರಾಬೆನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ.
ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಬೆಳಿಗ್ಗೆ ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ದೆಹಲಿಯಿಂದ ಅಹಮಾದಾಬಾದ್ ಗೆ ತೆರಳಿದ್ದಾರೆ. ನಿಗದಿ ಪಡಿಸಿದ್ದ ಸಮಯಕ್ಕೂ ಮುಂಚಿತವಾಗಿಯೇ ಪ್ರಧಾನಿ ಮೋದಿ ಆಸ್ಪತ್ರೆಗೆ ಆಗಮಿಸಿ ತಾಯಿಯ ಆರೋಗ್ಯ ವಿಚಾರಿಸಿದರು.
ಬಳಿಕ ತಾಯಿಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಈ ನಡುವೆ ಯುನ್ ಮೆಹ್ತಾ ಆಸ್ಪತ್ರೆ ವೈದ್ಯರು ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
*ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲು*
https://pragati.taskdun.com/pm-narendra-modis-motherheerabenadmittedhospitalahmedabad/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ