ಸುವರ್ಣ ಸೌಧದ ಆವಣದಲ್ಲಿ ನಾಳೆ ಚನ್ನಮ್ಮ, ರಾಯಣ್ಣ, ಗಾಂಧೀಜಿ, ಅಂಬೇಡ್ಕರ್ ಪ್ರತಿಮೆಗೆ ಶಂಕುಸ್ಥಾಪನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ. 29 ರಂದು ಬೆಳಗ್ಗೆ 10.15ಕ್ಕೆ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.
ಕಳೆದ ವರ್ಷದ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಈ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ.
ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ಪ್ರತಿ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟದ ಸದಸ್ಯರು ಹಾಗೂ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
*ಬೆಳಗಾವಿಯಲ್ಲಿ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಸಲ್ಮಾ.ಕೆ ಫಾಹೀಮ್ ಮಿಂಚಿನ ಸಂಚಾರ*
https://pragati.taskdun.com/belgaumanimal-husbandry-department-secretarysalma-k-faheem/
https://pragati.taskdun.com/arecanutaraga-jnanendravidhanasabhe/
*ವರ್ಷಕ್ಕೆ 4 ಸಾವಿರ ಯುವಜನರಿಗೆ ಕೌಶಲ್ಯ ತರಬೇತಿ ನೀಡುವ ಗುರಿ*
https://pragati.taskdun.com/foundation-stone-layingbelgaum-kgttiashwaththa-narayana/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ