Kannada NewsLatest

*ಸುವರ್ಣ ಸೌಧದ ಆವರಣದಲ್ಲಿ ರಾಣಿ ಚೆನ್ನಮ್ಮ, ರಾಯಣ್ಣ, ಮಹಾತ್ಮಾ ಗಾಂಧೀಜಿ, ಅಂಬೇಡ್ಕರ್ ಪ್ರತಿಮೆ ನಿರ್ಮಾಣ; ಭೂಮಿ ಪೂಜೆ ನೆರವೇರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ‌‌. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಕೈಗೊಂಡು ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಅನೇಕ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

*ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ, ಭೂತರಾಮನಹಟ್ಟಿಯ ಮುಖ್ಯ ಪ್ರವೇಶ ದ್ವಾರ ಉದ್ಘಾಟಿಸಿದ ಸಿಎಂ*

https://pragati.taskdun.com/kitturu-rani-channamma-zoobhutaramanahatti-praveshadwaracm-basavaraj-bommaibelagavi/

Related Articles

Back to top button