Kannada NewsLatest

*ಕರ್ನಾಟಕ ಧನವಿನಿಯೋಗ ವಿಧೇಯಕ-2022ಕ್ಕೆ ವಿಧಾನ ಪರಿಷತ್ತನಲ್ಲೂ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಡಿ.೨೯ರಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಕರ್ನಾಟಕ ಧನವಿನಿಯೋಗ ವಿಧೇಯಕ-೨೦೨೨ಗೆ ವಿಧಾನ ಪರಿಷತ್ತಿನಲ್ಲಿಯು ಸಹ ಅಂಗೀಕಾರ ಸಿಕ್ಕಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ೨೦೨೨-೨೩ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ೮೦೦೧.೧೩ ಕೋಟಿ ರೂ.ಗಳ ಬೇಡಿಕೆಗಳ ಪ್ರಸ್ತಾವನೆಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದ್ದು, ಪರಿಷತ್ ಕೂಡ ಅನುಮೋದನೆ ನೀಡಬೇಕು ಎಂದು ಕೋರಿದರು.

ಇದರಿಂದಾಗಿ ರಾಜ್ಯದ ಪ್ರಗತಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಯಾವುದೇ ಜನಪ್ರಿಯ ಯೋಜನೆಗಳಿಗೆ ಅನುದಾನ ಮೀಸಲಿರಿಸದೇ ಅಗತ್ಯ ಯೋಜನೆಗಳಿಗೆ ಮಾತ್ರ ಅನುದಾನ ರೂಪಿಸಿದ್ದೇವೆ. ಇದು ಪ್ರಸಕ್ತ ಸಾಲಿನ ಆಯವ್ಯಯ ಗಾತ್ರದ ಶೇ.೮.೩೮ ರಷ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಬಳಿಕ ಸಭಾಪತಿಗಳು ವಿಧೇಯಕ ಸರ್ವಾನುಮತದಿಂದ ಅಂಗೀಕಾರವಾಗಿದೆ ಎಂದು ಪ್ರಕಟಿಸಿದರು.

ಧನವಿನಿಯೋಗ ವಿಧೇಯಕ-೨೦೨೨ ಬಗ್ಗೆ ಪರ್ಯಾಲೋಚಿಸುವ ಚರ್ಚೆಯಲ್ಲಿ ಪರಿಷತ್ತಿನ ವಿರೋಧಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್, ವಿರೋಧಪಕ್ಷದ ಮುಖ್ಯ ಸಚೇತಕರಾದ ಪ್ರಕಾಶ ಕೆ. ರಾಥೋಡ್, ಸದಸ್ಯರಾದ ಮರಿತಿಬ್ಬೇಗೌಡ, ತಿಪ್ಪೇಸ್ವಾಮಿ ಹಾಗೂ ಇತರರು ಮಾತನಾಡಿದರು.

*ಮೆಟ್ರೋ ರೈಲು ಯೋಜನೆ 2ನೇ ಹಂತ ಕಾಮಗಾರಿ ಪೂರ್ಣಗೊಳಿಸಲು ಡೆಡ್ ಲೈನ್*

https://pragati.taskdun.com/metro2nd-statge-workdeadlinecm-basavaraj-bommai/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button