Latest

*ಗೋವಾ ಸಿಎಂ ಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೋವಾ ಮುಖ್ಯಮಂತ್ರಿಗಳಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ದೇಶ ಕಾನೂನಿನಿಂದ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕಳಸಾ-ಬಂಡೂರಿ ಯೀಜನೆ ಡಿಪಿಆರ್ ಗೆ ಗೋವಾ ಸಿಎಂ ಸಾವಂತ್ ವಿರೋಧ ವ್ಯಕ್ತಪಡಿಸಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅಂತರ ರಾಜ್ಯ ಜಲ ವಿವಾದ ಕಾಯ್ದೆ ಇದೆ. ಸುಪ್ರೀಂಕೋರ್ಟ್ ಇದೆ, ನ್ಯಾಯ ಮಂಡಳಿಯಿದೆ. ಈ ಪ್ರಕರಣದಲ್ಲಿ ನ್ಯಾಯ ಮಂಡಳಿ ನಿರ್ಧಾರವನ್ನು ತಿಳಿಸಿದೆ. ನರೇಂದ್ರ ಮೋದಿಯವರ ಸರ್ಕಾರ 2018 ರಲ್ಲಿಯೇ ಅಧಿಸೂಚನೆ ಹೊರಡಿಸಿದೆ. ಈಗ ಡಿಪಿಆರ್ ಅನುಮೋಡಿಸಿದ್ದಾರೆ. ಇದೆಲ್ಲವೂ ಕಾನೂನು ಬದ್ಧವಾಗಿದೆ ಎಂದು ಹೇಲಿದರು.

ಕರ್ನಾಟಕ ಏನೇ ಮಾಡಿದರೂ ಕಾನೂನು ಬದ್ಧವಾಗಿ ಮಾಡುತ್ತೇವೆ. ಡಿಪಿಆರ್ ಅನುಮೋದನೆಯ ಮೂಲಕ ಮುಂದಿನ ಕೆಲಸಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಕಾನೂನು ಬದ್ಧವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನ್ಯಾಯಮಂಡಳಿಯು ನಮ್ಮ ಹಾಗೂ ಗೋವಾ ಬೇಡಿಕೆಯನ್ನು ಆಲಿಸಿದೆ. ಯಾರಿಗೂ ಧಕ್ಕೆಯಾಗದಂತೆ ನ್ಯಾಯಮಂಡಳಿ ತೀರ್ಪು ನೀಡಿದೆ. ಈ ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

*ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯ ಪ್ರವಾಸ: ನಿಗದಿಯಾದ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ*

Home add -Advt

https://pragati.taskdun.com/amith-shahkarnataka-visitcm-basavaraj-bommai/

Related Articles

Back to top button