ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಯಾವುದೇ ತೊಡಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪಂಚಮಸಾಲಿ ಸಮಾಜ ಹಾಗೂ ಒಕ್ಕಲಿಗ ಸಮಾಜಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕುಗಳಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ.
ಯಾರಿಗೂ ಯಾವುದೇ ಅನ್ಯಾಯವನ್ನು ನಮ್ಮ ಸರ್ಕಾರ ಮಾಡಿಲ್ಲ. ಈ ಬಗ್ಗೆ ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ. ವಿಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಮೀಸಲಾತಿ ಬೇಡಿಕೆ ಈಡೇರಿಸಿಲ್ಲ. ಈಗ ನಾವು ಮೀಸಲಾತಿ ಜಾರಿ ಮಾಡುತ್ತಿರುವುದರಿಂದ ಅವರಿಗೆ ಸಮಸ್ಯೆಯಾಗಿದೆಯಷ್ಟೆ ಎಂದು ಗರಂ ಆದರು.
*ಮಹದಾಯಿ ವಿಚಾರ; ಈಗ ಲೋಪದೋಷ ಹುಡುಕುವುದು ಕಾಂಗ್ರೆಸ್ ಮನಸ್ಥಿತಿಯನ್ನು ತೋರುತ್ತದೆ; ಸಿಎಂ ಕಿಡಿ*
https://pragati.taskdun.com/mahadaicm-basavaraj-bommaireactionhubli/
*ಕಾಡಾನೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿ; ಓರ್ವನ ಸ್ಥಿತಿ ಗಂಭೀರ*
https://pragati.taskdun.com/elephant-attackwatcher-deathh-d-kote/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ