ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಸ್ ವ್ಯವಸ್ಥೆಗಾಗಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ವೇಳೆ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲುಕಿನ ನಿಚ್ಛಣಿಕೆ ಗ್ರಾಮದಲ್ಲಿ ನಡೆದಿದೆ.
8ನೇ ತರಗತಿಯ ಅಕ್ಷತಾ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಅಪಘಾತದಲ್ಲಿ ಇನ್ನಿಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಿನ್ನೆ ಮೂವರು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದರು. ಶಿವನೂರ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿಹೊಡೆದಿದ್ದು, ಅಕ್ಷತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. 15 ದಿನಗಳ ಹಿಂದಷ್ಟೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಸಕ ಮಹಂತೇಶ ದೊಡ್ಡಗೌಡ ಅವರಿಗೆ ವಿದ್ಯಾರ್ಥಿನಿ ಮನವಿ ಮಾಡಿದ್ದಳು. ಆದಾಗ್ಯೂ ಬಸ್ ವ್ಯವಸ್ಥೆ ಮಾಡಿರಲಿಲ್ಲ.
ಇದೀಗ ವಿದ್ಯಾರ್ಥಿನಿ ಸಾವಿನ ಬೆನ್ನಲ್ಲೇ ಆಕ್ರೋಶ ಗೊಂಡಿರುವ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸಿದ್ದಾರೆ.
*BF.7 ಆತಂಕ; ಕ್ವಾರಂಟೈನ್ ಕಡ್ಡಾಯ*
https://pragati.taskdun.com/bf-7quarantinemandatory-travelers-from-high-risk-countries/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ