Latest

*ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

Home add -Advt

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯಮಂತ್ರಿಗಳು ತಿಳಿಸಿದರು.

*ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ*

https://pragati.taskdun.com/road-accident5-deathone-familytamilnadu/

Related Articles

Back to top button