*ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ.ಕೃಷ್ಣ* ; ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವಿಲ್ಲ ಎಂದ ಮಾಜಿ ಸಿಎಂ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಈಗಾಗಲೇ ರಾಜಕೀಯದಿಂದ ದೂರ ಉಳಿದು ಹಲವು ದಿನಗಳು ಕಳೆದಿವೆ. ರಾಜಕೀಯದಿಂದ ನಾನು ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಎಂ.ಕೃಷ್ಣ, ರಾಜಕಾರಣದಿಂದ ನಾನು ನಿವೃತ್ತಿಯಾಗಿ ಸುಮಾರು ದಿನಗಳಾಗಿವೆ. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವಿಲ್ಲ, ಕಾರಣ ರಾಜಕೀಯದಲ್ಲಿ ಯಾರೂ ಪಿಂಚಣಿ ನೀಡುವುದಿಲ್ಲ. ಹಾಗಾಗಿ ವರಿಷ್ಠರ ಗಮನಕ್ಕೆ ತರಬೇಕಿಲ್ಲ ಎಂದರು. ನಾನೇ ರಿಟೈರ್ ಆಗುವಾಗ ಭಾರತೀಯ ಜನತಾ ಪಕ್ಷ ನನ್ನನ್ನು ಕಡೆಗಣಿಸಿದೆ ಎಂಬ ಪ್ರಶ್ನೆ ಬರಲ್ಲ ಎಂದರು.
ನಮ್ಮ ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವಿರಬೇಕು. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿಯ ಹಾಗೆ ನಟನೆ ಮಾಡಲು ಆಗುತ್ತಾ? ಹಾಗಾಗಿ ವಯಸ್ಸಿಗೆ ಬೆಲೆಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದರು.
1989ರ ಡಿಸೆಂಬರ್ ನಿಂದ 1993ರವರೆಗೆ ವಿಧಾನಸಭೆ ಸ್ಪೀಕರ್ ಆಗಿ, ಬಳಿಕ 1999ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿದ್ದ ಎಸ್.ಎಂ.ಕೃಷ್ಣ, ಬಳಿಕ ಕೇಂದ್ರ ವಿದೇಶಾಂಗ ಸಚಿವರಾಗಿ, 2004ರಿಂದ 2008ರವರೆಗೆ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ 2017ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
*ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು*
https://pragati.taskdun.com/former-congress-president-sonia-gandhiadmittedhospital/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ