Kannada NewsLatest

*ಸಿಎಂ ಬೊಮ್ಮಾಯಿಗೆ 24 ಗಂಟೆ ಗಡುವು ನೀಡಿದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಘೋಷಣೆ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು 24 ಗಂಟೆಯೊಳಗೆ ಮೀಸಲಾತಿ ಕಲ್ಪಿಸಬೇಕು. ಇಲ್ಲವಾದಲ್ಲಿ ಸಿಎಂ ಕ್ಷೇತ್ರದಿಂದಲೇ ಉಗ್ರ ಹೋರಾಟ ನಡೆಸುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ಸರ್ಕಾರ 2D ಮೀಸಲಾತಿ ಘೋಷಿಸಿದೆ. ಇದು ನ್ಯಾಯವೋ ಅನ್ಯಾಯವೋ ಎಂಬ ಬಗ್ಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಶಾಸಕ ಯತ್ನಾಳ್, ಇನ್ನು 24 ಗಂಟೆಯಲ್ಲಿ ಸಿಎಂ ಬೊಮ್ಮಾಯಿ ಮೀಸಲಾತಿ ಪ್ರಕಟಿಸಬೇಕು. ಇಲ್ಲವಾದಲ್ಲಿ ಅವರು ಸ್ಪರ್ಧಿಸುವ ಹಾವೇರಿ ಜಿಲ್ಲೆ ಶಿಗ್ಗಾಂವಿಯಿಂದಲೇ ಹೋರಾಟ ಆರಂಭಿಸುತ್ತೇವೆ ಎಂದರು.

Home add -Advt

ಮೀಸಲಾತಿ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ತಮ್ಮ ತಾಯಿ ಮೇಲೆ ಆಣೆ ಮಾಡಿದ್ದರು. ಮುಖ್ಯಮಂತ್ರಿಯಾದಾಗಿನಿಂದ ಇಲ್ಲಿಯವರೆಗೂ ಸಿಎಂ ಬೊಮ್ಮಾಯಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಮಾತು ಕೇಳಿ ನಮಗೆ ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸಿಎಂ ಬೊಮ್ಮಾಯಿ ಅವರ ರಾಜಕೀಯ ಭವಿಷ್ಯ ನಿರ್ಧರಿಸುವ ಅಂತಿಮ ಹೋರಾಟ ಇದಾಗಲಿದೆ ಎಂದು ಗುಡುಗಿದ್ದಾರೆ.

*ಇಂಜಿನಿಯರಿಂಗ್ ಕಾಲೇಜಿನ ಮೇಲೆ NIA ದಾಳಿ; ಬಿಇ ವಿದ್ಯಾರ್ಥಿ ವಶಕ್ಕೆ*

https://pragati.taskdun.com/pa-engineering-college-mangalorenia-attackkukkar-bomb-blast-case/

Related Articles

Back to top button