
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾದ ಘಟನೆ ನಡೆದಿದೆ.
ರಾಜಾಜಿನಗರದ ಎನ್ ಪಿ ಎಸ್ ಶಾಲೆಗೆ ಇಂದು ಬೆಳಿಗ್ಗೆ 11:30ರ ಸುಮಾರಿಗೆ ಇಮೇಲ್ ರವಾನಿಸಲಾಗಿದ್ದು, ಅದರಲ್ಲಿ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಶಾಲೆಯ ಆವರಣದಲ್ಲಿ ಒಟ್ಟು ನಾಲ್ಕು ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಶಾಲಾ ಸಿಬ್ಬಂದಿಗಳು ತಕ್ಷಣ ಬಸವೇಶ್ವರ ನಗರ ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮಕ್ಕಳನ್ನು, ಶಿಕ್ಷಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ, ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಪತ್ತೆದಳ, ಶ್ವಾನ ದಳದಿಂದ ಪರಿಶೀಲಿಸಲಾಗಿದ್ದು, ಇದೊಂದು ಹುಸಿಬಾಂಬ್ ಬೆದರಿಕೆ ಕರೆ ಎಂದು ತಿಳಿದುಬಂದಿದೆ.
*ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣ*
https://pragati.taskdun.com/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d%e0%b2%ae%e0%b3%87%e0%b2%b3%e0%b2%a8%e0%b2%be%e0%b2%a7/