ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಇಂದು ಈ ಪುಸ್ತಕ ಬಿಡುಗಡೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು ಮಾಡುವಂತೆ ಕಾಂಗ್ರೆಸ್ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಕಾನೂನು ಸುವವಸ್ಥೆ ದೃಷ್ಟಿಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವವನ್ನು ರದ್ದು ಮಾಡುವಂತೆ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಚಿತ್ರವನ್ನು ತಿದ್ದಿ, ಕಪೋಲಕಲ್ಪಿತ ಬರಹಗಳನ್ನು ಪುಸ್ತಕದಲ್ಲಿ ಸೇರಿಸಲಾಗಿದೆ. ಇದು ಒಂದು ಸಮುದಾಯದ ವಿರುದ್ಧದ ಪುಸ್ತಕವಾಗಿದೆ. ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಅಂದಿನ ಟಿಪ್ಪು ಈಗಿನ ಸಿದ್ದುವೇ? ಎಂಬ ಹಿಂಬರಹ ನೀಡುವ ಮೂಲಕ ಸಿದ್ದರಾಮಯ್ಯ ತೇಜೋವಧೆ ಮಾಡಲಾಗುತ್ತಿದೆ. ಹೀಗಾಗಿ ಪುಸ್ತಕ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಸೂರ್ಯ ಮುಕುಅಮ್ದರಾಜ್ ದೂರಿನಲ್ಲಿ ತಿಳಿಸಿದ್ದಾರೆ.
*HDK ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು*
https://pragati.taskdun.com/santro-ravi-casehome-minister-araga-jnanendrah-d-kumaraswamyreaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ