ಪ್ರಗತಿವಾಹಿನಿ ಸುದ್ದಿ; ಹಾಸನ: ಆರ್ ಎಸ್ ಎಸ್ ಕಾರ್ಯಕರ್ತ ಸೇರಿ ಮೂವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲಿ ಉದ್ವಿಗ್ನ ಸ್ಥಿತಿಯುಂತಾಗಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ತಂಬಲಗೇರಿ ಗ್ರಾಮದ ನವೀನ್ ಅಲಿಯಾಸ್ ಪಚ್ಚಿ (39) ಮೃತ ಆರ್ ಎಸ್ ಎಸ್ ಹಾಗೂ ಬಿಜೆಪಿ ಕಾರ್ಯಕರ್ತ. ದಯಾನಂದ ಹಾಗೂ ಪದ್ಮನಾಭ ಎಂಬುವವರು ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವೀನ್, ದಯಾನಂದ, ಪದ್ಮನಾಭ, ರಾಜಾಚಾರಿ ಸೇರಿ ನಾಲ್ವರು ಮೀನು ಹಿಡಿಯಲು ಹೇಮಾವತಿ ನದಿಗೆ ತೆರಳಿದ್ದರು ನದಿ ದಡದಲ್ಲಿ ಕುಳಿತಿದ್ದ ವೇಳೆ ನಾಲ್ವರು ಸ್ನೇಹಿತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ನವೀನ್ ಸ್ಥಳದಲ್ಲೇ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ದಯಾನಂದ ಹಾಗೂ ಪದ್ಮನಾಭ ಗಂಭೀರವಾಗಿ ಗಾಯಗೊಂಡಿದ್ದು, ಅದೃಷ್ಟವಶಾತ್ ರಾಜಾಚಾರಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ.
ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*RTI ಕಾರ್ಯಕರ್ತ ರಾಮಕೃಷ್ಣ ಹತ್ಯೆ ಕೇಸ್: ಪ್ರಮುಖ ಆರೋಪಿ PDO ಎಸ್ಕೇಪ್*
https://pragati.taskdun.com/rti-activistramakrishna-murder-casedavanagereaccused-pdo-escape/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ