Latest

ರಾಜ್ಯಕ್ಕೆ ಕಾಂಗ್ರೆಸ್ ಪಕ್ಷ ಅನಿವಾರ್ಯ: ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: “ರಾಜ್ಯಕ್ಕೆ ಕಾಂಗ್ರೆಸ್ ಪಕ್ಷ ಅನಿವಾರ್ಯ. ಕಣ್ಣು ಕಾಣದ, ಕಿವಿ ಕೇಳದ ಬಿಜೆಪಿ ಸರಕಾರವನ್ನು ಕಿತ್ತೆಸೆಯಿರಿ,” ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಜನತೆಗೆ ಕರೆ ನೀಡಿದರು.

ಚಿಕ್ಕೋಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಒಬ್ಬ ಮಹಿಳೆಯಾಗಿ ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಪಡುತ್ತಿರುವ ಸಂಕಟಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ. ಇಂದು ಅಡುಗೆ ಅನಿಲ, ಬೇಳೆಕಾಳು, ಗೋದಿ ಹಿಟ್ಟು ಪ್ರತಿಯೊಂದರ ಬೆಲೆ ಗಗನಕ್ಕೇರಿದೆ. ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಸೋನಿಯಾ ಗಾಂಧಿಯವರ ಆದ್ಯತೆಯಿಂದಾಗಿ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬರದಿದ್ದರೆ ಇಂದು ಮಹಿಳೆಯರಿಗೆ ಒಂದು ಹೊತ್ತಿನ ಊಟಕ್ಕೂಗತಿಯಿರುತ್ತಿರಲಿಲ್ಲ,” ಎಂದರು.

“ಮುಂಬರುವ ದಿನಗಳಲ್ಲಿ ಎಲ್ಲ ರೀತಿಯ ಜನಪರ ಯೋಜನೆಗಳನ್ನು ನೀಡಲು ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರು, ರೈತರು, ಯುವಜನರು ಸಂಕಲ್ಪಿಸಬೇಕು,” ಎಂದು ಅವರು ಕರೆ ನೀಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಹಾಗೂ ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು, ಸ್ಥಳೀಯ ನಾಯಕರು ಹಾಜರಿದ್ದರು.

Home add -Advt

*ಮಹಿಳೆ ಮೇಲೆ ಗ್ಯಾಂಗ್ ರೇಪ್: ವಿಡಿಯೋ ಬಿಡಿಗಡೆ ಮಾಡುವುದಾಗಿ ಬ್ಲ್ಯಾಕ್ ಮೇಲ್; ಮಾಜಿ ಶಾಸಕ, ಐಎ ಎಸ್ ಅಧಿಕಾರಿಗಳ ವಿರುದ್ಧ ಕೇಸ್ ದಾಖಲು*

https://pragati.taskdun.com/ex-mlaias-officergang-rape-casecase-filebiharapatna/

ಸ್ಮಶಾನ ಕಾರ್ಮಿಕರು ಇನ್ನು ಸತ್ಯ ಹರಿಶ್ಚಂದ್ರ ಬಳಗ : ಸಿಎಂ ಬಸವರಾಜ ಬೊಮ್ಮಾಯಿ

https://pragati.taskdun.com/graveyard-workers-are-now-satya-harishchandra-balaga-cm-basavaraja-bommai/

*NIAಯಿಂದ ಮತ್ತಿಬ್ಬರು ಶಂಕಿತ ಆರೋಪಿಗಳ ಬಂಧನ*

https://pragati.taskdun.com/mangalore-kukker-bomb-blast-casetwo-suspected-accused-arestednia/

Related Articles

Back to top button