ಪ್ರಗತಿವಾಹಿನಿ ಸುದ್ದಿ; ಕಠ್ಮಂಡು: 72 ಜನರಿದ್ದ ಯೇಟಿ ಏರ್ ಲೈನ್ಸ್ ವಿಮಾನ ಪತನ ಪ್ರಕರಣದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಯೇಟಿ ಏರ್ ಲೈನ್ಸ್ ವಿಮಾನವು ಪತನಗೊಂಡು, ಲ್ಯಾಂಡಿಂಗ್ ವೇಳೆ ರನ್‌ವೇಯಲ್ಲಿಯೇ ವಿಮಾನ ಹೊತ್ತಿ ಉರಿದಿದೆ. ಕಠ್ಮಂಡುವಿನಿಂದ ಪೋಖರಾ ವಿಮಾನ ನಿಲ್ದಾಣಕ್ಕೆ ವಿಮಾನ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ವಿಮಾನದಲ್ಲಿ ನಾಲ್ವರು ಸಿಬ್ಬಂದಿಗಳು, 10 ವಿದೇಶಿ ಪ್ರಯಾಣಿಕರು ಸೇರಿದಂತೆ ಒಟ್ಟು 68 ಪ್ರಯಾಣಿಕರು ಇದ್ದರು. ವಿಮಾನ ದುರಂತದಲ್ಲಿ 35ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈವರೆಗೆ 17 ಮೃತದೇಹಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆದರೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
ಸಧ್ಯದ ಮಾಹಿತಿ ಪ್ರಕಾರ ಪೋಖರಾ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
*68 ಪ್ರಯಾಣಿಕರಿದ್ದ ವಿಮಾನ ಪತನ; ರನ್ ವೇ ನಲ್ಲಿಯೇ ಹೊತ್ತಿ ಉರಿದ ವಿಮಾನ*
https://pragati.taskdun.com/nepalapokhara-international-airportflight-crash/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ