ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ, ಚಳಿ ಹೆಚ್ಚಾಗಲಿದೆ.
ಇಂದಿನಿಂದ 6ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿದ ವಾತಾವರನ ಇರಲಿದ್ದು, ಬೆಂಗಳೂರಿನಲ್ಲಿ ಜವರಿ 19ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ ಮುಂತಾದ ಜಿಲ್ಲೆಗಳಲ್ಲಿ ಶೀತ ಮಾರುತ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿಯೂ ಶೀತದ ಅಲೆ ಹೆಚ್ಚಲಿದೆ. ಬಾಗಲಕೋಟೆ, ಬೀದರ್, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲೂ ಶೀತ ಅಲೆಯ ಮುನ್ಸೂಚನೆ ನೀಡಲಾಗಿದ್ದು, ಭಾರಿ ಚಳಿ ಆರಂಭವಾಗಿದೆ.
ರಾಜ್ಯಾದ್ಯಂತ ಶೀತ ಅಲೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕನಿಷ್ಠ ಮೂರು ಪದರಗಳ ಬಟ್ಟೆ ಧರಿಸಿ. ದೇಹವನ್ನು ಬೆಚ್ಚಗಿರುವಂತೆ ನೋಡಿಕೊಳ್ಳಿ. ದೇಹವನ್ನು ಪೂರ್ತಿ ಕವರ್ ಮಾಡಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ.
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 22° ಸೆಲ್ಸಿಯಸ್.
https://pragati.taskdun.com/karnatakacold-wavealertimd/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ