ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಪಡೆದಿರುವ ಆರೋಪ ಕೇಳಿಬಂದಿದ್ದು, ಶಾಸಕರ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಂಜುನಾಥ್, ಆಡಿಯೋ ಬಿಡುಗಡೆ ಮಾಡಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಜೊತೆ ಸುದ್ದಿಗೋಷ್ಠಿ ನಡೆಸಿದ ಮಂಜುನಾಥ್, ಶಾಸಕ ತಿಪ್ಪಾರೆಡ್ಡಿ ಆಡಿಯೋ ರಿಲಿಸ್ ಮಾಡಿದ್ದಾರೆ. ಅಲ್ಲದೇ ಶಾಸಕರ ವಿರುದ್ಧ ಲೋಕಾಯುಕ್ತಕ್ಕೆ ಅಫಿಡವಿಟ್ ಮಡಿರುವುದಾಗಿ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಲಂಚ ಶುರು ಮಾಡಿದ್ದೇ ಶಾಸಕ ತಿಪ್ಪಾರೆಡ್ಡಿ. ಅವರು ಲಂಚ ಪಡೆದಿರುವ ಬಗ್ಗೆ ಸಾಕಷ್ಟು ದಾಖಲೆಗಳು ಇವೆ. ಶೇ.25ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚಿತ್ರದುರ್ಗ ಕ್ಷೇತ್ರದಲ್ಲಿ 700 ಕೋಟಿ ರೂಪಾಯಿ ಕಾಮಗಾರಿಯಾಗಿದೆ. ಕಟ್ಟಡಗಳಿಗೆ ಶೇ.15 ರಷ್ಟು ಕಮಿಷನ್ ಪಡೆಯುತ್ತಾರೆ. ರಸ್ತೆಗಳಿಗೆ ಶೇ.10ರಷ್ಟು ಕಮಿಷನ್ ಪಡೆಯುತ್ತಾರೆ. 2019ರಿಂದ ಇತ್ತೀಚಿಗೆ ನಾನೇ 90 ಲಕ್ಷ ಕಮಿಷನ್ ಕೊಟ್ಟಿದ್ದೇನೆ. ಪಿಡಬ್ಲ್ಯು ದಿ ಬಿಲ್ಡಿಂಗ್ ಕಟ್ಟಿ ಮೂರು ವರ್ಷ ಆಗಿದೆ. ಬಿಲ್ ಪಾವತಿ ಮಾಡಿ ಅಂದ್ರೆ ಕಮಿಷನ್ ಕೇಳ್ತಾರೆ. 2.5 ಕೋಟಿ ಕಾಮಗಾರಿಗೆ ಲಕ್ಷಾಂತರ ರೂಪಾಯಿ ಕಮಿಷನ್ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
*25,000 ಕೋಟಿ ಬಾಕಿ ಬಿಲ್ ಉಳಿಸಿಕೊಂಡ ಸರ್ಕಾರ; ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ ಎಚ್ಚರಿಕೆ ಕೊಟ್ಟ ಕೆಂಪಣ್ಣ*
https://pragati.taskdun.com/kempannaworningbjp-govt/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ