4 ಕಡೆಯಿಂದ ಬಿಜೆಪಿ ರಥಯಾತ್ರೆ – ಬೊಮ್ಮಾಯಿ ಮಾಹಿತಿ

 

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌

Home add -Advt

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬೀರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ.
ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು.

ಕಾಂಗ್ರೆಸ್ 2ನೇ ಘೋಷಣೆ ಗೃಹ ಲಕ್ಷ್ಮೀ : ಪ್ರತಿ ತಿಂಗಳು ಮಹಿಳೆಗೆ 2000 ರೂ. ಗ್ಯಾರಂಟಿ; ಪ್ರಿಯಾಂಕಾ ಗಾಂಧಿ ಘೋಷಣೆ

Related Articles

Back to top button