Latest

*ಮಾಜಿ ಶಿಕ್ಷಣ ಸಚಿವ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಗ್ಗಪ್ಪ ದೇಶಪ್ಪ ಲಮಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ದೇಶಪ್ಪ ಲಮಾಣಿ ಕರ್ನಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು. ಬ್ಯಾಡಗಿ ಕ್ಷೇತ್ರದಿಂದ 1983 ಹಾಗೂ 1989ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಸಚಿವ, ಹಿರಿಯ ರಾಜಕಾರಣಿ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.

4 ಕಡೆಯಿಂದ ಬಿಜೆಪಿ ರಥಯಾತ್ರೆ – ಬೊಮ್ಮಾಯಿ ಮಾಹಿತಿ

https://pragati.taskdun.com/bjp-rathayatra-from-4-places/

Related Articles

Back to top button