Latest

*ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ*

ಪ್ರಗತಿವಾಹಿನಿ ಸುದ್ದಿ; ಸಾಗರ: ಮಾಜಿ ಶಾಸಕ, ಸಾಗರ ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ ಇಂದು ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಹೆಗಡೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ನಿಧನರಾಗಿದ್ದಾರೆ.

Home add -Advt

ತಿಮ್ಮಪ್ಪ ಹೆಗಡೆ ಎರಡು ಬಾರಿ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಕಾಗೋಡು ತಿಮ್ಮಪ್ಪ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದು ಬೀಗಿದ್ದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಸಾಗರದಲ್ಲಿ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ, ಅಂತರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರ ಅಪ್ಸ್ ಕೋಸ್ ನಮ್ತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಡಿಕೆ ಬೆಳೆಗಾರರ ಸಂಘಗಳ ಸಂಸ್ಥಾಪಕ ಅಧ್ಯಕ್ಷರಾಗಿ, ಕ್ಯಾಂಪ್ಕೋ ಸಂಸ್ಥೆ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

*ಮಾಜಿ ಶಿಕ್ಷಣ ಸಚಿವ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ಇನ್ನಿಲ್ಲ*

https://pragati.taskdun.com/ex-ministerdr-heggappa-deshappa-lamanideath/

Related Articles

Back to top button