ಪ್ರಗತಿವಹಿನಿ ಸುದ್ದಿ; ಕಾರವಾರ: ಸಿಮೆಂಟ್ ತುಂಬಿದ್ದ ಲಾರಿಯೊಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಮಧ್ಯೆದಲ್ಲೇ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿಉರಿದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸ್ವಲ್ಪದರಲ್ಲಿ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಯಲ್ಲಾಪುರ ಠಾಣಾ ಪೊಲೀಸರು ಭೆಟಿ ನೀಡಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅವಘಡ ಸಂಭವಿಸಿದೆ.
*ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ*
https://pragati.taskdun.com/ex-mla-l-timmappa-hegadeno-moresagara/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ