ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹ ಸಚಿವರ ಮನೆಯಲ್ಲಿಯೇ ಸ್ಯಾಂಟ್ರೋ ರವಿ ಹಣ ಎಣಿಸುತ್ತಿದ್ದ ಫೋಟೋ ವೈರಲ್ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ನನ್ನ ಮೇಲೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾನಡಿದ ಸಚಿವರು, ಯಾರನ್ನೇ ಕೇಳಿ, ನಾನು ಎಲ್ಲರಿಗೂ ಸಿಗುತ್ತೇನೆ. ನಮ್ಮ ಮನೆಗೆ ಪ್ರತಿದಿನ ಸಾವಿರಾರು ಜನ ಬರುತ್ತಾರೆ ಎಲ್ಲರ ಕ್ಯಾರೆಕ್ಟರ್ ನೋಡಿ ಒಳಗೆ ಬಿಡಲು ಆಗಲ್ಲ. ಒಂದು ಫೋಟೋಗೆ ಇಷ್ಟು ಕಥೆ ಕಟ್ಟಿದರೆ ಹೇಗೆ? ಸಾರ್ವಜನಿಕ ಜೀವನದಲ್ಲಿದ್ದುಕೊಂಡು ರಾಜಕೀಯವಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಈ ರೀತಿ ಕೆಸರು ಎರಚಿದರೆ ತುಂಬಾ ಬೇಸರವಾಗುತ್ತದೆ ಎಂದರು.
ಇಂತದ್ದೇ ಬಿಸಿನೆಸ್ ಮಾಡುವವರಿಗೆ ಏನೂ ಸಮಸ್ಯೆ ಆಗಲ್ಲ. ಆದರೆ ನಮ್ಮಂತವರಿಗೆ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಮಹಿಳೆಯರಿಗೆ 2000 ರೂಪಾಯಿ ನೀಡುವುದಾಗಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅರಗ ಜ್ಞಾನೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೂ ಗೊತ್ತಿದೆ. ಹಾಗಾಗಿ ಸುಳ್ಳು ಭರವಸೆಗಳನ್ನು ಕೊಡುತ್ತಿದ್ದಾರೆ. ಜವಾಬ್ದಾರಿಯುತ ಪಕ್ಷ ಹೀಗೆ ಉಚಿತ ಕೊಡುಗೆ ನಿಡಲು ಆಗಲ್ಲ. ಉಚಿತ ಹಣ ಘೋಶಿಸಲು ಬೊಕ್ಕಸಕ್ಕೆ ಹಣ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕರು ವೋಟಿಗಾಗಿ ಸುಳ್ಳು ಭರವಸೆಗಳನ್ನು ನೀಡಿ ಚುನಾವಣೆ ಎದುರಿಸುತ್ತಿದ್ದಾರೆ. ರಾಜ್ಯದ ಜನತೆ ಇಂತಹ ಸುಳ್ಳನ್ನು ನಂಬುವುದಿಲ್ಲ ಎಂದು ಹೇಳಿದರು.
*ನೋಡ ನೋಡುತ್ತಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಸಿಮೆಂಟ್ ಲಾರಿ*
https://pragati.taskdun.com/lorryfire-accidentnational-highway-66/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ