ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಪಡಿತರಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ 2000 ರೂ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಮುಂದಿನ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು. ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದರೆ 2000 ರೂ ಎಂದು ಹೇಳಿದ್ದಾರೆ. ಆದರೆ, ಅವರು ಅಧಿಕಾರಕ್ಕೆ ಬರುವುದಿಲ್ಲ. ಅವರಿಗಿಂತ ಮೊದಲೇ ನಾವು ಈ ಯೋಜನೆಯನ್ನು ಜಾರಿಗೆ ತರಲಿದ್ದೇವೆ ಎಂದು ಹೇಳಿದರು.
*ಶೀತಗಾಳಿ ಜೊತೆಗೆ ಆಲಿಕಲ್ಲು ಮಳೆ ಎಚ್ಚರಿಕೆ*
https://pragati.taskdun.com/cold-waverain-alertimd/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ