ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನ್ಯಾಯಬೇಕು ಮೋದಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಕೊರೊನಾ ಕಾಲದಲ್ಲಿ ಸ್ಯಾನಿಟೈಜರ್, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ 3000 ಕೋಟಿ ಅವ್ಯವಹಾರ ನಡೆದಿದೆ. ಕೊರೊನಾದಿಂದಾಗಿ ಹಾದಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ. ಮೋದಿಯವರೇ ನ್ಯಾಯ ಬೇಕು ಎಂದು ಕೇಳಿತ್ತಿವೆ ಎಂದು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಪಿಎಸ್ ಐ ನೇಮಕಾತಿ ಹಗರಣದಿಂದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ PWD ಸಹಾಯಕ ಎಂಜಿನಿಯರ್ ಗಳ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ.
ಕೋವಿಡ್ ಸಂದರ್ಭದಲ್ಲಿ ಅಗತ್ಯ ಸಲಕರಣೆ ಪೂರೈಕೆ ಮಾಡಿದ್ದ ಗುತ್ತಿಗೆದಾರ ಬಸವರಾಜ್ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್ ಹಣ ನೀಡದೇ ಇರುವುದರಿಂದ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಹಾಕಿದ್ದಾರೆ. ಈತನಿಗೆ ನ್ಯಾಯ ಕೊಡಿಸಿ. ಪ್ರಾಣ ಉಳಿಸಬೇಕಾದವರು ನೀವಲ್ಲವೇ?
ಸಚಿವರಾಗಿದ್ದಾಗ ಈಶ್ವರಪ್ಪ ಅವರಿಗೆ 40% ಕಮಿಷನ್ ನೀಡಲಾಗದೇ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾದರು. ಬದುಕಿದ್ದಾಗಲಂತೂ ನೀವು ಆತನಿಗೆ ನ್ಯಾಯ ಕೊಡಲಿಲ್ಲ. ಸತ್ತಮೇಲಾದರೂ ನ್ಯಾಯ ಸಿಗುವಂತೆ ಮಾಡಿ. ನ್ಯಾಯಬೇಕು ಮೋದಿ ಎಂದು ಹ್ಯಾಷ್ ಟ್ಯಾಗ್ ಹಾಕಿ ಸಿದ್ದರಾಮಯ್ಯ ಪೋಸ್ಟರ್ ಬಿಡಿಗಡೆ ಮಾಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಹೊಣೆಗೇದಿತನದಿಂದ ನಾಡಿಗೆ ಬೆಳಕುಕೊಟ್ಟ ಲಕ್ಷಾಂತರ ಜನರ ಬಾಳು ಕತ್ತಲಾಗುತ್ತಿದೆ. ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆಗೆ ಸ್ಪಂಧಿಸಿ ಪ್ರಧಾನಿಗಳೇ ನ್ಯಾಯ ಕೊಡಿ ಎಂದು ತಿಳಿಸಿದ್ದಾರೆ.
#ನ್ಯಾಯಬೇಕು_ಮೋದಿ @narendramodi @PMOIndia pic.twitter.com/AoIinJvJ57
— Siddaramaiah (@siddaramaiah) January 19, 2023
#ನ್ಯಾಯಬೇಕು_ಮೋದಿ @narendramodi @PMOIndia pic.twitter.com/lsajxp5mhN
— Siddaramaiah (@siddaramaiah) January 19, 2023
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ