ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಟಿಕೆಟ್ ಆಕಾಂಕ್ಷಿಗಳು ರಾಜಕೀಯ ಪಕ್ಷಗಳ ನಾಯಕರ ಮನವೊಲಿಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ನತ್ತ ಮುಖಮಾಡಿದ್ದ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನಡೆ ಮತ್ತೆ ಕುತೂಹಲ ಮೂಡಿಸಿದೆ.
ಮೊನ್ನೆಯಷ್ಟೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದ ಎಂಎಲ್ ಸಿ ಹೆಚ್.ವಿಶ್ವನಾಥ್ ಇಂದು ದೀಢಿರ್ ಆಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ ಬಳಿಕ ಈಗ ಸಿಎಂ ಬಸವರಾಜ್ ಬೊಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ವಿಸ್ವನಾಥ್ ನಡೆ ಬಗ್ಗೆ ಮತ್ತೆ ಕುತೂಹಲ ಇಮ್ಮಡಿಗೊಂಡಿದೆ.
ಪರಿಷತ್ ಸದಸ್ಯ ಸ್ಥಾನ ನೀಡಿದರೂ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಕಾಂಗ್ರೆಸ್ ನಾಯಕರನ್ನು ಭೇಟುಯಾಗುವ ಮೂಲಕ ತಾವು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು.
*ಕರ್ತವ್ಯನಿರತ CPI ಮೇಲೆ ಹಲ್ಲೆ; ಮಾಜಿ ಕಾರ್ಪೊರೇಟರ್ ಅರೆಸ್ಟ್*
https://pragati.taskdun.com/ex-corporater-arrestedcpi-attack-casebangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ