ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಹಗರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಇದೀಗ ಹೊಸ ವರಸೆ ಆರಂಭಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ನಿನ್ನೆಯಷ್ಟೇ ಬಂಧಿಸಲು ಬಂದಿದ್ದ ಸಿಐಡಿ ಅಧಿಕಾರಿಗಳನ್ನು ತಳ್ಳಿ ಎಸ್ಕೇಪ್ ಆಗಿದ್ದ ಆರೋಪಿ ರುದ್ರೇಗೌಡ ಪಾಟೀಲ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜನರು ಬಯಸಿದರೆ ಬರುವ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾನೆ.
ನಾನು ಅಧಿಕಾರಿಗಳನ್ನು ತಳ್ಳಿ ಓಡಿಹೋಗಿದ್ದೇನೆ ಎಂಬುದು ಸುಳ್ಳು. ನಾನು ಎಲ್ಲಿಯೂ ಓಡಿ ಹೋಗಿಲ್ಲ. ಇಲ್ಲೇ ಇದ್ದೇನೆ. ಇಡಿ ಅಧಿಕಾರಿಗಳು ಬಂದಾಗ ಅವರ ವಿಚಾರಣೆ ಎದುರಿಸಿದ್ದೇನೆ. ಬಳಿಕ ಮನೆಯಿಂದ ಹೊರಬಂದಿದ್ದೇನೆ. ಈಗ ಸಿಐಡಿ ಅಧಿಕಾರಿಗಳು ಬಂದಿದ್ದಾರೆ. ಸಿಐಡಿ ವಿರುದ್ಧ ನಡೆದುಕೊಳ್ಳಲು ಸಾಧ್ಯವಿಲ್ಲ. ನಾನು ಈ ನೆಲದ ಕಾನೂನು ಗೌರವಿಸುವವನು. ರಾಜಕೀಯ ಕುತಂತ್ರದಿಂದಾಗಿ ನನ್ನನ್ನು ಹಾಗೂ ನನ್ನ ಸಹೋದರನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಬಹುದು, ಸಮಾಜಸೇವೆ ಮಾಡಬಹುದು ಎಂಬ ಕಾರಣಕ್ಕೆ ಈರೀತಿ ಮಾಡಿದ್ದಾರೆ. ಕೆಲ ಸಿಐಡಿ ಅಧಿಕಾರಿಗಳು ರಾಜಕೀಯ ಮುಖಂಡರ ಮಾತು ಕೇಳಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಳ್ಳು ಆರೋಪಕ್ಕೆ ನಾನು ಹೆದರಲ್ಲ. ಅಫಜಲಪುರ ಜನರ ಸೇವೆಗೆ ನಾನು ಸದಾಸಿದ್ಧ. ಇಂತಹ ಇನ್ನೂ ಹತ್ತು ಕೇಸ್ ಹಾಕಿದರೂ ನಾನು ಹೆದರಲ್ಲ, ನನ್ನ ಸಮಾಜಸೇವೆಯೂ ನಿಲ್ಲಲ್ಲ ಎಂದು ಎಂದಿದ್ದಾರೆ.
*ರಾಜ್ಯದ ನಾಲ್ಕು ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ತಯಾರಿ*
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ