ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿ ಸೈಡ್ ಲೈನ್ ಮಾಡುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಗೆ ಯಡಿಯೂರಪ್ಪ ಅವರನ್ನು ಆಹ್ವಾನಿಸಿಲ್ಲ. ಇದೇ ಕಾರಣಕ್ಕೆ ಯಡಿಯೂರಪ್ಪ ಸಭೆಯಿಂದ ದೂರ ಉಳಿದಿದ್ದರು. ಈ ಹಿಂದೆ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೂ ಯಡಿಯೂರಪ್ಪ ಅವರನ್ನು ಅಹ್ವಾನಿಸದೇ ನಿರ್ಲಕ್ಷ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಆದರೆ ಬಿಜೆಪಿಯಲ್ಲಿ ತನ್ನನ್ನು ನಿರ್ಲಕ್ಷ್ಯಸುತಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಮಜಾಯಿಷಿ ನೀಡಿದ್ದಾರೆ.
ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಿನ್ನೆ ಬೇರೆ ಸಭೆಗೆ ಹೋಗಿದ್ದರಿಂದ ಬಿಜೆಪಿಗೆ ಸಭೆಗೆ ಹೋಗಲು ಸಾಧ್ಯವಾಗಿಲ್ಲ. ಇದಕ್ಕೆ ವಿಷೇಶ ಕಾರಣ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ನನಗೆ ಎಲ್ಲಾ ಸ್ಥಾನಮಾನಗಳನ್ನು ನೀಡಿದೆ. ಕೇಂದ್ರ ಹಾಗೂ ರಾಜ್ಯ ನಾಯಕರು ನನ್ನನ್ನು ಗೌರವಯುತವಾಗಿ ಕಾಣುತ್ತಿದ್ದಾರೆ. ಬಿಜೆಪಿ ನಾಯಕರಿಗೆ ನನೌ ಋಣಿಯಾಗಿದ್ದೇನೆ ಎಂದರು.
ಬಿಜೆಪಿ ಸರ್ಕಾರ ಉತ್ತಮ ಆಡಲಿತವನ್ನು ನೀಡುತ್ತಿದೆ. ರಾಜ್ಯದ ಜನತೆ ಹಾಡಿ ಹೊಗಳುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
*ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ PSI ಪ್ರಕರಣದ ಆರೋಪಿ ರುದ್ರೇಗೌಡ ಪಾಟೀಲ್*
https://pragati.taskdun.com/545-psi-scamaccused-rudregowda-patilelectioncontesannounce/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ