Latest

*JDS ಅಭ್ಯರ್ಥಿ ಹೃದಯಾಘಾತದಿಂದ ನಿಧನ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಯೋಧ ಶಿವಾನಂದ ಸೋಮನಾಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಿವಾನಂದ ಸೋಮನಾಳ (55) ಪಂಚರತ್ನ ರಥಯಾತ್ರೆ ಬಳಿಕ ತಮ್ಮ ಕ್ಷೇತ್ರ ಸಿಂದಗಿಗೆ ತೆರಳಿದ್ದರು. ಪರಿಚಯಸ್ಥರ ಮನೆಯಲ್ಲಿ ಕುಳಿತಿದ್ದ ಶಿವಾನಂದ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. 15 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಶಿವಾನಂದ ಸೋಮನಾಳ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿದ್ದರು.

ಪಕ್ಷದ ಅಭ್ಯರ್ಥಿಯ ಅಕಾಲಿಕ ನಿಧನಕ್ಕೆ ಆಘಾತವಾಗಿದೆ. ಅವರ ಕುಟುಂಬದವರಿಗೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

*ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲೋದು; ಸಿದ್ದರಾಮಯ್ಯ ಆತ್ಮವಿಶ್ವಾಸ*

https://pragati.taskdun.com/siddaramaihkolarabadami/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button