Latest

*ಟ್ರಕ್-ಕಾರು ಭೀಕರ ಅಪಘಾತ; 6 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಉನ್ನಾವೋ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶ ಉನ್ನಾವೋ ಬಳಿ ಸಭವಿಸಿದೆ.

ಅಚಲ ಗಂಜ್ ಪೊಲೀಸ್ ಠಾಣಾ ವ್ಯಾಪ್ತೊಯಲ್ಲಿ ಈ ಅಪಘಾತ ಸಂಭವಿಸಿದೆ. ಲಕ್ನೋ-ಕಾನ್ಪುರ ಹೆದ್ದಾರಿಯಲ್ಲಿ ಡಂಪರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದ್ದು ಮಹಿಳೆ ಹಾಗೂ ಆಕೆಯ ಮಗಳಿಗೆ ಡಿಕ್ಕಿ ಹೊಡೆದು ಕಾರು ಕಂದಕಕ್ಕೆ ಉರುಳಿ ಬಿದ್ದಿದೆ.

Home add -Advt

ದುರಂತದಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದರೆ ಉಳಿದ ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಚೊಟ್ಟಿಲಾಲ್, ಶಿವಾಂಗ್, ವಿಮಲೇಶ್, ರಾಮ್ ಪ್ಯಾರಿ, ಹಾಗೂ ಆಕೆಯ ಮಗಳು ಶಿವಾನಿ ಎಂದು ಗುರುತಿಸಲಾಗಿದ್ದು, ಇನ್ನೋರ್ವ ವ್ಯಕ್ತಿಯ ಗುರುತು ಪತೆಯಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ತಿಳಿಸಿದ್ದಾರೆ.

*ಹಿರಿಯ ನಟ ಲಕ್ಷ್ಮಣ ಇನ್ನಿಲ್ಲ*

https://pragati.taskdun.com/sandalwoodactorlakshmanadeath/

Related Articles

Back to top button