Latest

*ಮನೆಯಲ್ಲಿಯೇ ನೇಣಿಗೆ ಶರಣಾದ ಮಹಿಳೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಸುರತ್ಕಲ್ ನ ಬಾಳ ಗ್ರಾಮದ ಒಟ್ಟೆಕಾಯರ್ ನಲ್ಲಿ ನಡೆದಿದೆ.

ಒಟ್ಟೆಕಾಯ‌ರ್ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಪತಿ-ಪತ್ನಿ ನಡುವೆ ಆರಂಭವಾದ ಜಗಳ ಮನಸ್ಥಾಪಕ್ಕೆ ತಿರುಗಿ ಆತ್ಮಹತ್ಯೆಯಲ್ಲಿ ಕೊನೆಯಾಗಿದೆ ಎನ್ನಲಾಗಿದೆ.

ಹರೀಶ್ ಹಾಗೂ ದಿವ್ಯಾ ಇಬ್ಬರೂ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಪತಿ- ಪತ್ನಿ ನಡುವೆ ಮನಸ್ತಾಪವುಂಟಾಗಿ ಜಗಳವಾಗಿದೆ. ಇದರಿಂದ ಬೇಸರಗೊಂಡ ದಿವ್ಯಾ ಮನೆಗೆ ಬಂದು ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ಟ್ರಕ್-ಕಾರು ಭೀಕರ ಅಪಘಾತ; 6 ಜನರ ದುರ್ಮರಣ*

https://pragati.taskdun.com/trukcaraccident6-people-deathuttara-pradesh/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button