ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದತ್ತಪೀಠ ಹಾಗೂ ದತ್ತಮಾಲೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಕೊನೆಗೂ ಕ್ಷಮೆಯಾಚಿಸಿದ್ದಾರೆ.
ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುವ ವೇಳೆ ಶಾಸಕ ಟಿ.ಡಿ.ರಾಜೇಗೌಡ ವಿಡಿಯೋ ಮೂಲಕ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಹಳ್ಳಿಗಳಲ್ಲಿ ರೂಢಿಯಿರುವ ಶಬ್ದಗಳನ್ನು ಬಳಸಿದ್ದೆ. ಆ ಶಬ್ದ ಬಳಕೆ ಯಾರ ಸಂಸ್ಕೃತಿಯೂ ಆಗಬಾರದು. ಆ ರೀತಿ ಶಬ್ದ ಬಳಸಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿ ಆಕ್ರೋಶದಿಂದ ಮಾತನಾಡಿದ್ದೆ. ದತ್ತಮಾಲೆ ಹಾಕಿಲ್ಲ ಎಂದು ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ವಿಷಯವಾಗಿ ಬುದ್ಧಿಹೇಳುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ದತ್ತಮಾಲೆ ಬಗ್ಗೆ ಶಾಸಕ ಟಿ.ಡಿ.ರಾಜೇಗೌಡ ವಿವಾದಾತ್ಮಕ ಹೇಳಿಕೆಗೆ 24 ಗಂಟೆಯೊಳಗೆ ಕ್ಷಮೆಯಾಚಿಸುವಂತೆ ಹಿಂದೂಪರ ಸಂಘಟನೆಗಳು ಗಡುವು ನೀಡಿದ್ದರು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.
*PSI ಹಗರಣ; ರುದ್ರೇಗೌಡ ಪಾಟೀಲ್ ನಿಂದ ಮತ್ತಷ್ಟು ಆಡೀಯೋ ಬಿಡುಗಡೆ*
https://pragati.taskdun.com/psi-scamrudregowda-patilcid-officersaudio-release/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ