Kannada NewsKarnataka NewsLatest

20 ಸಾವಿರ ಗಿಡ ನೆಡುವ ಯೋಜನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

 

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಲಕ್ಷ್ಮಿ ತಾಯಿ ಫೌಂಡೇಶನ್ ಮೂಲಕ ಈ ವರ್ಷ 20 ಸಾವಿರ ಗಿಡಗಳನ್ನು ನೆಡುವ ಯೋಜನೆ ಹಮ್ಮಿಕೊಂಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾರ್ಮಿಕರಿಗೆ 500 ಗಿಡಗಳನ್ನು ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

ಮಂಗಳವಾರ ಸಾಂಬ್ರಾಕ್ಕೆ ತೆರಳಿದ ಹೆಬ್ಬಾಳಕರ್, ಅಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರಿಗೆ 500 ಗಿಡಗಳನ್ನು ವಿತರಿಸಿದ್ದಲ್ಲದೆ, ಅವರಿಗೆ ಊಟದ ವ್ಯವಸ್ಥೆ ಮಾಡಿ, ಅವರೊಂದಿಗೇ ಊಟ ಮಾಡಿದರು.

ಬರಬರುತ್ತ ಬರಗಾಲ ತೀವ್ರವಾಗುತ್ತಿದೆ. ಅಂತರ್ಜಲ ಕಡಿಮೆಯಾಗುತ್ತಿದೆ. ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುವುದಿಲ್ಲ. ಹಾಗಾಗಿ  ಏನೇ ಆಸ್ತಿ ಮಾಡದಿದ್ದರೂ ಗಿಡಗಳನ್ನಾದರೂ ನೆಡುವ ಮೂಲಕ ಮುಂದಿನ ಪೀಳಿಗೆಗೆ ದೊಡ್ಡ ಆಸ್ತಿ ಮಾಡಿಟ್ಟು ಹೋಗಬೇಕು. ಹಾಗಾಗಿ ಪ್ರತಿಯೊಬ್ಬರೂ ಗಿಡಗಳನ್ನು ನೆಡಬೇಕು ಎಂದು ಹೆಬ್ಬಾಳಕರ್ ಕರೆನೀಡಿದರು.

ಈ ಸಂದರ್ಭದಲ್ಲಿ ಮಾರಿಹಾಳ ಪೊಲೀಸ್ ಇನಸ್ಪೆಕ್ಟರ್ ವಿಜಯಕುಮಾರ ಸಿನ್ನೂರ್, ತಾಲೂಕ್ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ ದೇಸಾಯಿ, ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಸೂಲಗಿತ್ತಿ ಪಣಿಯಮ್ಮಗೆ ಸನ್ಮಾನ

ಇದೇ ಸಂದರ್ಭದಲ್ಲಿ, ಈವರೆಗೆ 5 ಸಾವಿರಕ್ಕಿಂತ ಹೆಚ್ಚು ಹೆರಿಗೆ ಮಾಡಿಸಿರುವ 107 ವಯಸ್ಸಿನ  ಸೂಲಗಿತ್ತಿ ಸಾಂಬ್ರಾದ  ಪಣಿಮಾ ತಾನ್ಸೆವಾಲೆ  ಅವರನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸನ್ಮಾನಿಸಿದರು.

 

 

 

 

 

Related Articles

Back to top button