ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಶಾಸಕರ ನಿಧಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರದೇವರ ಮಂದಿರದ ಸಮುದಾಯ ಭವನದ ನಿರ್ಮಾಣಕ್ಕಾಗಿ ಒಟ್ಟೂ 7 ಲಕ್ಷ ರೂ. ಹಾಗೂ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕಾಗಿ ಒಟ್ಟು 3.50 ಲಕ್ಷ ರೂ,ಗಳನ್ನು ಮಂಜೂರು ಮಾಡಲಾಗಿದ್ದು, ಇದರ ಚೆಕ್ ನ್ನು ಆಯಾ ದೇವಸ್ಥಾನಗಳ ಕಮೀಟಿಯವರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಹಸ್ತಾಂತರಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ನಾಗೇಶ ದೇಸಾಯಿ, ಲಕ್ಷ್ಮಣ, ರಮೇಶ, ಬಸವರಾಜ ಮ್ಯಾಗೋಟಿ, ಭಾಗಣ್ಣ ನರೋಟಿ, ದೇವಸ್ಥಾನದ ಟ್ರಸ್ಟ್ ಕಮೀಟಿಯ ಅಧ್ಯಕ್ಷರಾದ ರಾಜಕುಮಾರ, ಟ್ರಸ್ಟ್ ಕಮೀಟಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
https://pragati.taskdun.com/construction-or-re-built-of-103-temples-in-belgaum-rural-constituency-lakshmi-hebbalkar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ