Kannada NewsLatest

*ಬೆಳಗಾವಿ ಬಿಜೆಪಿ ಬಣ ರಾಜಕೀಯದ ಬಗ್ಗೆ ಅರುಣ್ ಸಿಂಗ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಬಿಜೆಪಿ ಘಟಕದಲ್ಲಿ ಬಣ ಬಡಿದಾಟ ಆರಂಭವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ರಾಜ್ಯ ಬಿಜೆಪಿ ನಾಯಕರು ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿ ರಾಜಕೀಯದಲ್ಲಿ ಅಂತಹ ಯಾವುದೇ ಬಣವಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವಿಲ್ಲ. ಬಿಜೆಪಿಯಲ್ಲಿರುವುದೇ ಒಂದು ಬಣ ಅದು ಬಿಜೆಪಿ ಬಣ ಅಷ್ಟೇ ಎಂದು ಹೇಳಿದ್ದಾರೆ.

Home add -Advt

ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಯಾವುದೇ ಅಸಮಾಧಾನವೂ ನಮ್ಮಲ್ಲಿಲ್ಲ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

*ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು ರಾಘವೇಂದ್ರ….ಎಂದ ಶಾಸಕಿ ಅನಿತಾ ಕುಮಾರಸ್ವಾಮಿ*

https://pragati.taskdun.com/h-d-kumaraswamyanita-kumaraswamymantralaya-visit/

 

Related Articles

Back to top button