ಬೆಳಗಾವಿ: ಬಿಜೆಪಿ ರಾಷ್ಟ್ರೀಯ ರೈತ ಮೋರ್ಚಾ ಕಾರ್ಯಕಾರಿಣಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 2 ದಿನಗಳ ಬಿಜೆಪಿ ರಾಷ್ಟ್ರೀಯ ರೈತ ಮೋರ್ಚಾ ಕಾರ್ಯಕಾರಿಣಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಭಾನುವಾರ ಚಾಲನೆ ನೀಡಿದರು.
2008ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಜಾರಿಗೆ ತಂದಿದ್ದೇನೆ. ರಾಜ್ಯದ ರೈತರಿಗೆ ಕೃಷಿ ಸಮ್ಮಾನ್ ಯೋಜನೆಗೆ 4 ಸಾವಿರ ರೂ ,ಸೇರಿಸಿ 10 ಸಾವಿರ ರೂ. ಕೊಡುವ ಯೋಜನೆಯನ್ನು ಜಾರಿಗೆ ತಂದಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.
ಗಂಗಾ ಕಲ್ಯಾಣ ಯೋಜನೆ ಮೂಲಕ ಕೆರೆ ತುಂಬಿಸುವ ಯೋಜನೆ ರೈತರ ಅಭ್ಯುದಯಕ್ಕೆ ಕಾರವಾಗಿದೆ. ರೈತ ಗೀತೆ ಕಡ್ಡಾಯ ಗೊಳಿಸುವ ಮೂಲಕ ರೈತರ ಆತ್ಮಾಭಿಮಾನ ಬೆಳೆಯುವಂತೆ ಮಾಡಲಾಗಿದೆ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ರಾಜಕುಮಾರ ಚಾಹರ್ ಮಾತನಾಡಿ, ದೇಶದಲ್ಲಿ ಸಾವಯವ ಕೃಷಿಯನ್ನು ಜಾಗೃತಗೊಳಿಸುವ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ರೈತ ಮೋರ್ಚಾ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿದೆ. 2014ಕ್ಕೂ ಮೊದಲು ಕೇವಲ 29000 ಕೋಟಿ ರೂ. ಕೃಷಿ ಬಜೆಟ್ ಇತ್ತು. ನಾವು ಅಧಿಕಾರಕ್ಕೆ ಬಂದ ನಂತರ 1.35 ಸಾವಿರ ಕೋಟಿ ರೂ.ಗೆ ಏರಿಕೆ ಮಾಡಿದ್ದೇವೆ. ರೈತ ಸಮ್ಮಾನ ಯೋಜನೆ ಮೂಲಕ ಪ್ರತಿ ರೈತರಿಗೆ ವರ್ಷಕ್ಕೆ 6 ಸಾವಿರ ರೂ ನೀಡಲಾಗುತ್ತಿದೆ. ಇದರಿಂದ ಬಡ ರೈತರಿಗೆ ಅನುಕೂಲವಾಗಿದೆ ಎಂದರು.
ಕಿಸಾನ್ ಕ್ರೆಡಿಟ್ ಕಾರ್ಡನ್ನು ಅಟಲ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಜಾರಿಗೆ ತಂದರು. ಇದನ್ನು ಪ್ರಧಾನಿ ನರೇಂದ್ರ ಮೋದಿ ಪಶು ಸಂಗೋಪನೆ ಮತ್ತು ಮೀನುಗಾರಿಕೆಗೂ ವಿಸ್ತರಿಸಿದ್ದಾರೆ. ಸ್ವಾಮಿನಾಥನ್ ಆಯೋಗದ ವರದಿಯನ್ನು ಮನಮೋಹನ್ ಸಿಂಗ್ ಸರಕಾರ ಮೂಲೆಗುಂಪು ಮಾಡಿತ್ತು. ಆದರೆ ಮೋದಿ ಸರಕಾರ ವರದಿಯ ಶೇ.98ರಷ್ಟು ಜಾರಿಗೊಳಿಸಿದೆ ಎಂದು ಅವರು ಹೇಳಿದರು.
ರೈತ ಮೋರ್ಚಾ ರಾಜ್ಯಾಧ್ಯಕ್ಷ, ಸಂಸದ ಈರಪ್ಪ ಕಡಾಡಿ ಸ್ವಾಗತಿಸಿದರು. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ರವಿ ಕುಮಾರ, ಸಂಸದೆ ಮಂಗಲಾ ಅಂಗಡಿ ಮೊದಲಾದವರು ಇದ್ದರು.
*ಯುದ್ಧ ವಿಮಾನ ದುರಂತ: ಹುತಾತ್ಮ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿಗೆ ಗಣ್ಯರ ಅಂತಿಮ ನಮನ*
https://pragati.taskdun.com/iaf-plane-crashwing-commander-hanumantarao-sarathidead-bodybelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ