ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ನನಗೆ 80 ವರ್ಷ ವಯಸ್ಸಾಗಿದೆ. ಹಾಗಾಗಿ ನಾನು ಚುನಾವಣೆಗೆ ನಿಲ್ಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಆದರೆ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ, ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು.
ನಾನು ಕೇಂದ್ರ ರಾಜಕೀಯಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೆ ನನಗೆ ಆಹ್ವಾನ ನೀಡಿದ್ದರು. ನಾನು ಹೋಗಲಿಲ್ಲ. ರಾಜ್ಯದಲ್ಲಿ ನನಗೆ ಎಲ್ಲ ಅಧಿಕಾರ, ಸ್ಥಾನ ಮಾನ ಕೊಟ್ಟಿದ್ದಾರೆ. ಆ ಋಣ ತಿರಿಸುವುದು ನನ್ನ ಜವಾಬ್ದಾರಿ ಎಂದರು.
ಚುನಾವಣೆಯನ್ನು ಮೂರುವರೆ ತಿಂಗಳಲ್ಲಿ ಎದುರಿಸಲಿದ್ದೇವೆ. ಸ್ವತಃ ಕೇಂದ್ರ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಆಗಮಿಸಿ ಮಾರ್ಗದರ್ಶನ ಮಾಡಿದ್ದಾರೆ. ಈ ಚುನಾವಣೆಯಲ್ಲಿ ನೂರಕ್ಕೆ ನೂರು 140 ಕ್ಷೇತ್ರದಲ್ಲಿ ಗೆಲವು ಸಾಧಿಸಿ ಸ್ಪಷ್ಟ ಬಹುಮತ ಪಡೆಯುತ್ತೇವೆ.
ಇದೇ ವೇಳೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಗೆಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್ ಕೊಡುತ್ತೇವೆ. ಒಂದಲ್ಲ, ಎರಡು ಬಾರಿ ಸರ್ವೆ ಮಾಡಿ ಎಲ್ಲರೂ ಚರ್ಚಿಸಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಅಭ್ಯರ್ಥಿ ಅಯ್ಕೆ ವಿಚಾರದಲ್ಲಿ ಯಾವುದೇ ಕಾಂಪ್ರಮೈಸ್ ಇಲ್ಲ, ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು.
ಈ ವೇಳೆ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
*ಆರೋಗ್ಯ ಸಚಿವರ ಮೇಲೆ ASIಯಿಂದಲೇ ಗುಂಡಿನ ದಾಳಿ*
https://pragati.taskdun.com/odish-health-minister-nabadasasishootout/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ