ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಅಪ್ರಾಪ್ತ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ.
13 ವರ್ಷದ ಬಾಲಕಿ 2 ತಿಂಗಳ ಗರ್ಭಿಣಿಯಾದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಪತ್ನಿ ಇಲ್ಲದ ಸಮಯ ನೋಡಿ ಸ್ವತ: ತಂದೆಯೇ ಮಗಳ ಮೇಲೆ ನೀಚ ಕೃತ್ಯವೆಸಗಿದ್ದಾನೆ. ಬಾಲಕಿ ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ.
ವಿಚಾರಣೆ ನಡೆಸಿದಾಗ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಂದೆ ಎಸ್ಕೇಪ್ ಆಗಿದ್ದಾನೆ. ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ