LatestUncategorized

*ಬಿಜೆಪಿ ಟಿಕೆಟ್ ಗಾಗಿ ಪೊಲೀಸ್ ಹುದ್ದೆಯನ್ನೇ ತೊರೆದ ಲೋಕಾಯುಕ್ತ ಇನ್ಸ್ ಪೆಕ್ಟರ್*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಓರ್ವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಲೋಕಾಯುಕ್ತದಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಂದ್ರ ನಾಯಕ್ ರಾಜೀನಾಮೆ ನೀಡಿದ್ದು, ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.

ಮೂಲತ: ವಿಜಯಪುರ ಜಿಲ್ಲೆಯ ಐನಾಪೂರ ಗ್ರಾಮದವರಾದ ಮಹೇಂದ್ರ ನಾಯಕ್ ಆರಂಭದಿಂದಲೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಜತೆ ಗುರುತಿಸಿಕೊಂಡಿದ್ದರು. 2005ರಲ್ಲಿ ತಾಲೂಕು ಪಂಚಾಯತ್ ಚುನವಾಣೆಯಲ್ಲಿ ಬಿಜೆಪಿಯಿಂದ ನಿಂತು ಗೆದ್ದಿದ್ದರು. 2009ರಲ್ಲಿ ಪೊಲೀಸ್ ಇಲಕಹೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿತು. ತಾಲೂಕು ಪಂಚಾಯತ್ ಸದಸ್ಯರಾಗಿದ್ದುಕೊಂಡೇ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆ ಬರೆದು ನೇರ ನೇಮಕಾತಿ ಮೂಲಕ ಸಬ್ ಇನ್ಸ್ ಪೆಕ್ಟರ್ ಆಗಿದ್ದರು.

ಬಳಿಕ ತಾಲೂಕು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳ್ಳಾರಿಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಒಂದುವರೆ ವರ್ಷದ ಹಿಂದೆ ಬಡ್ತಿ ಪಡೆದಿದ್ದರು. ಸಧ್ಯ ಬಾಗಲಕೋಟೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಮಹೇಂದ್ರ ನಾಯಕ್, ಈಗ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಾಗಠಾಣಾ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಯತ್ನಿಸಿದ್ದು, ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನಿಸಿದ್ದಾರೆ.

*ಬದ್ಧವೈರಿಗಳ ಅಪ್ಪುಗೆಗೆ ಕೈ-ಕಮಲ ಕಾರ್ಯಕರ್ತರೇ ಶಾಕ್*

https://pragati.taskdun.com/shreeramulusantosh-laadmeetbellaribannihatti-jatre/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button