ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರದ ಮೇಲೆ ನಿಷೇಧ ಹೇರಿದ ಸರ್ಕಾರದ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ.
2002ರ ಗುಜರಾತ್ ಗಲಭೆ ಘಟನಾವಳಿಗಳಿಗೆ ಸಂಬಂಧಿಸಿದಂತೆ ಬಿಬಿಸಿ ಸಿದ್ಧಪಡಿಸಿದ್ದ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಕ್ರಮ ಪ್ರಶ್ನಿಸಿ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್, ಟಿಎಂಸಿ ನಾಯಕಿ ಮಹುವಾ ಮೋಯಿತ್ರಾ ಮತ್ತು ಹಿರಿಯ ಪತ್ರಕರ್ತ ಎನ್. ರಾಮ್ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಇಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದರೇಶ್ ಅವರಿರುವ ನ್ಯಾಯಪೀಠ ವಿಚಾರಣೆ ಕೈಗೊಳ್ಳಲಿದೆ.
ಅರ್ಜಿಯ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನ್ಯಾಯ ಪೀಠಕ್ಕೆ ಜನವರಿ 30ರಂದು ಮನವಿ ಮಾಡಲಾಗಿತ್ತು.
ಬಿಬಿಸಿ ಸಿದ್ಧಪಡಿಸಿದ ಸಾಕ್ಷ್ಯಚಿತ್ರ ಸತ್ಯಾಂಶಗಳನ್ನು ಒಳಗೊಂಡಿದೆ. ಇದರಿಂದ ಗುಜರಾತ್ ಗಲಭೆಯಲ್ಲಿ ನೊಂದವರಿಗೆ ನ್ಯಾಯ ಒದಗಿಸಿಕೊಡಲು ಈ ಸಾಕ್ಷ್ಯ ನೆರವಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯಚಿತ್ರಕ್ಕೆ ಹಾಗೂ ಅದನ್ನು ಜಾಲತಾಣಗಳಲ್ಲಿ ಬಿತ್ತರಿಸುವುದಕ್ಕೆ ಸರಕಾರ ಹೇರಿರುವ ನಿಷೇಧಕ್ಕೆ ತಡೆಯಾಜ್ಞೆ ನೀಡಬೇಕು. ಎಂದು ಅರ್ಜಿದಾರರು ತಮ್ಮ ಪರ ನ್ಯಾಯವಾದಿಗಳಾದ ಎಂಎಲ್ ಶರ್ಮಾ, ಸಿಯು ಸಿಂಗ್ ಮುಖಾಂತರ ಕೋರಿದ್ದರು.
*ಭೀಕರ ಅಪಘಾತ; ಆಸ್ಪತ್ರೆ ತಲುಪುವ ಮೊದಲೇ ಮಾರ್ಗ ಮಧ್ಯೆಯೇ ಪ್ರಾಣಬಿಟ್ಟ ಕಂದಮ್ಮ*
https://pragati.taskdun.com/accidentkiddeathtipaturufathermother-critical/
https://pragati.taskdun.com/air-india-flightfireemergency-landing/
*ಭಿನ್ನಾಭಿಪ್ರಾಯವಿದೆ ಆದರೆ….ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದೇಕೆ?*
https://pragati.taskdun.com/g-parameshwarranadeep-surjewalameet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ