ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ನಡುವೆ ಸಂಭವಿದ ಭೀಕರ ಅಪಘಾತದಲ್ಲಿ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ.
ಅಕ್ಬರಸಾಬ್ ನೇಸರಗಿ (28) ಮೃತ ದುರ್ದೈವಿ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಅಕ್ಬರ್ ಸಾಬ್ ನೇಸರಗಿಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಹಾಗೂ ಆಂಬುಲೆನ್ಸ್ ಡಿಕ್ಕಿಹೊಡೆದಿದ್ದು, ಅದಾಗಲೇ ಅಪಘಾತದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅಕ್ಬರಸಾಬ್ ಕೊನೆಯುಸಿರೆಳೆದಿದ್ದಾನೆ.
ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
*ರಾಜ್ಯ ರಾಜಕೀಯಕ್ಕೆ ಸುಮಲತಾ ಎಂಟ್ರಿ ಬಹುತೇಕ ಖಚಿತ*
https://pragati.taskdun.com/sumalatastate-politicsentry/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ