ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿ ಪ್ರವಾಸ ಕೈಗೊಡಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಪ್ರಧಾನಿ ಮೋದಿ ಸರ್ಕಾರ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು, ವರಿಷ್ಠರನ್ನು ಭೇಟಿಯಾಗಿ ಸಿಎಂ ಬೊಮ್ಮಾಯಿ ಧನ್ಯವಾದ ಅರ್ಪಿಸಲಿದ್ದಾರೆ.
ಇಂದು ಮಧ್ಯಾಹ್ನ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ, ಸಂಜೆ ವರಿಷ್ಠರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಧನ್ಯವಾದ ಹೇಳುವ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಕೇಂದ್ರ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಚುನಾವಣೆ ಸಂದರ್ಭದಲ್ಲಿ ಪ್ರಕರಣ ಸಿಬಿಐ ಗೆ ವಹಿಸಿದರೆ ಆಗುವ ಲಾಭ-ನಷ್ಟದ ಬಗ್ಗೆಯೂ ಮಾಹಿತಿ ನೀಡುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಆಗಮಿಸುತ್ತಿರುವ ಹೊತ್ತಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿರುವುದು ಮಹತ್ವ ಪಡೆದಿದೆ. ಮಧ್ಯಾಹ್ನ 2 ಗಂಟೆಗೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ರಾತ್ರಿಯೇ ಬೆಂಗಳೂರಿಗೆ ಮತ್ತೆ ವಾಪಸ್ ಆಗಲಿದ್ದಾರೆ.
*ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿ ವಿಚಾರ; ಸಚಿವ ಮುರುಗೇಶ್ ನಿರಾಣಿ ಹೇಳಿದ್ದೇನು?*
https://pragati.taskdun.com/ramresh-jarakiholiamit-shahmeetmurugesh-nirani-reaction/
*ಏಕಾಏಕಿ ಪ್ರವಹಿಸಿದ ವಿದ್ಯುತ್; ಇಬ್ಬರ ದುರ್ಮರಣ*
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ