Latest

*ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಪಕ್ಷ ಹಾಗೂ ಅದರ ಕಾರ್ಯಕ್ರಮಗಳು ಏನು ಮಾಡಲು ಸಾಧ್ಯ ಎಂಬ ಬಗ್ಗೆ ಮಾತನಾಡಿದರೆ ಜನ ಚಿಂತನೆ ಮಾಡುತ್ತಾರೆಯೇ ಹೊರತಾಗಿ ವೈಯಕ್ತಿಕ ಮಾತು ಗಳು ಪ್ರಸ್ತುತವಲ್ಲ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಗೆ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷದ ಬಗ್ಗೆ ಅವರು ಚಿಂತಿಸಬೇಕಿಲ್ಲ. ಕಾಂಗ್ರೆಸ್ ಮೊದಲು ಅವರ ಪಕ್ಷದ ಸರಿಮಾಡಿಕೊಳ್ಳಲಿ. ಬ್ರಾಹ್ಮಣರು ಎಂದೆಲ್ಲಾ ಜನ ನೋಡುವುದಿಲ್ಲ ಎಂದರು.

ಕಾನೂನು ಕ್ರಮ
ಮದುವೆಯೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಶಾಸಕ ರಮೇಶ್ ಜಾರಳಿಹೊಳಿ ತಮ್ಮನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ವಿವರಗಳನ್ನು ನೀಡಿದರೆ ಕಾನೂನು ಪ್ರಕಾರ ಕೆಲಸ ಮಾಡುತ್ತೇವೆ ಎಂದರು.

Home add -Advt

*ಕೃತಕ ಗರ್ಭಧಾರಣೆಯ ವೆಚ್ಚ ರೂ.5 ಸಾವಿರದಿಂದ ರೂ.70 ಸಾವಿರ ಮಾತ್ರ; ಸಚಿವೆ ಶಶಿಕಲಾ ಜೊಲ್ಲೆ*

https://pragati.taskdun.com/siddhagiri-janani-ivf-centreinaugurationshashikala-jolle/

Related Articles

Back to top button